ಪುತ್ತೂರು: ಅಕ್ರಮವಾಗಿ ಡೀಸೆಲ್ ಸಂಗ್ರಹಿಸಿಟ್ಟಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮನೆಯೊಂದರ ಸಮೀಪವಿರುವ ಶೆಡ್‌ನಲ್ಲಿ ನಡೆದಿದೆ.

ಕಣಿಯೂರು ಗ್ರಾಮದ ಮುರಲ್ತಿಯಾರ್ ಎಂಬಲ್ಲಿ ಬ್ಯಾರೆಲ್ ಮತ್ತು ಕ್ಯಾನ್‌ಗಳಲ್ಲಿ ಅಕ್ರಮವಾಗಿ ಡೀಸೆಲ್ ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಾ. 9 ರಂದು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಜಗದೀಶ್ (35) ಎಂಬವರ ಮನೆಯ ಪಕ್ಕದ ಶೆಡ್‌ನಲ್ಲಿ ತಪಾಸಣೆ ನಡೆಸಿದಾಗ, ತಲಾ 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್‌ಗಳು ಮತ್ತು 35 ಲೀಟರ್ ಸಾಮರ್ಥ್ಯದ 5 ಕ್ಯಾನ್‌ಗಳಲ್ಲಿ ಒಟ್ಟು 4,175 ಲೀಟರ್ ಡೀಸೆಲ್ ಪತ್ತೆಯಾಗಿದೆ.

ಅಲ್ಲದೆ, ಸ್ಥಳದಲ್ಲಿದ್ದ ಹಲವಾರು ಖಾಲಿ ಬ್ಯಾರೆಲ್‌ಗಳು, ಕ್ಯಾನ್‌ಗಳು ಮತ್ತು ಇತರ ಸಾಮಗ್ರಿಗಳನ್ನು ಸೇರಿದಂತೆ ಸುಮಾರು 4,175 ಲೀಟರ್ ನಷ್ಟು ಡೀಸೆಲ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಆರೋಪಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.






