Breaking
12 Mar 2026, Thu

ಬಂಟ್ವಾಳ: ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದ ಸಾಧಕಿಯರಿಗೆ ಸನ್ಮಾನ

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕಿ ಪುಷ್ಪಲತಾ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಶ್ರೀ ಅಶೋಕ್ ಸಾಮೂಹಿಕ ಗೀತಗಾಯನ ಹಾಡಿದರು. ಬಳಿಕ ಕ್ರೀಡಾ ಕ್ಷೇತ್ರದ ಸಾಧಕರಾದ ಪ್ರತಿಕ್ಷ ಜೋಗಿ, ನಿಸರ್ಗ ಎಸ್. ಬಿ., ತೇಜಸ್ವಿನಿ ಇವರನ್ನು ಸನ್ಮಾನಿಸಲಾಯಿತು.


ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಶೆಟ್ಟಿ, ಕಾರ್ಯದರ್ಶಿ ಹರ್ಷಿಣಿ, ಪುಷ್ಪಾನಂದ, ಅಕ್ಷಿತಾ ಜೆ. ಆರ್.ರಜನಿ ಚಿಕ್ಕಿಯಮಠ, ಭವಾನಿ ಶೆಟ್ಟಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *