Breaking
12 Mar 2026, Thu

ಬಂಟ್ವಾಳ: ಸಜೀಪ ಮಾಗಣೆ ಮಿತ್ತಮಜಲು ಕ್ಷೇತ್ರ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಇಲ್ಲಿ ಸಜೀಪ ಮಾಗಣೆ ಮಿತ್ತಮಜಲು ಕ್ಷೇತ್ರ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ಶ್ರೀ ಕ್ಷೇತ್ರದಲ್ಲಿ ಜರಗಿತು.

ಸುದೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮದ ವಿವರ ನೀಡಿದರು.

ಜೀರ್ಣೋದ್ಧಾರ ಸಮಿತಿ ಗೌರವ ಅಧ್ಯಕ್ಷ ವಿವೇಕ ಶೆಟ್ಟಿ ಗುತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ವಿವರ ನೀಡಿದರು. ಜಯ ಶಂಕರ ಬಾ ಶ್ರೀ ತಾಯ ಹಸಿರುಹೊರೆ ಕಾಣಿಕೆ ಬಗ್ಗೆ ಮಾಹಿತಿ ನೀಡಿದರು. ಎಸ್ ಶ್ರೀಕಾಂತ ಶೆಟ್ಟಿ, ದೇವಿ ಪ್ರಸಾದ್ ಪೂಂಜಾ, ಚಂದ್ರಶೇಖರ ಶೆಟ್ಟಿ, ರತ್ನಾಕರ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ. ರಾಧಾಕೃಷ್ಣ ಆಳ್ವ ಪ್ರಾಸ್ತಾವಿಕವಾಗಿ ಮಾತಾಡಿ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವಂತೆ ವಿನಂತಿಸಿದರು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೆಂಕಟೇಶ್ವರ ಭಟ್ ಮುಳ್ಳುಂಜ ಅಧ್ಯಕ್ಷತೆ ವಹಿಸಿದ್ದರು.

Leave a Reply

Your email address will not be published. Required fields are marked *