Breaking
13 Mar 2026, Fri

ಬೈಕ್ ಗೆ ಗೂಡ್ಸ್ ಟೆಂಪೋ ಡಿಕ್ಕಿ: ಸವಾರ ಸಾವು

ಮಂಗಳೂರು: ಬೈಕ್‌ ಗೆ ಗೂಡ್ಸ್‌ ಟೆಂಪೋವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ನಡೆದಿದೆ.

ಮೃತಪಟ್ಟ ಯುವಕನನ್ನು ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ, ಸಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ.

ಮಂಗಳೂರಿನ ಶೋರೂಮ್‌ ಒಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಜೇಶ್ ಅವರು ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪದ ತಿರುವಿನಲ್ಲಿ ಗೂಡ್ಸ್‌ ಟೆಂಪೋ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಸಜೇಶ್ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *