Breaking
13 Mar 2026, Fri

ಕಾರ್ಕಳದಲ್ಲಿ ಆಕಸ್ಮಿಕ ಬೆಂಕಿ: 8 ಎಕರೆ ಪ್ರದೇಶ ಸುಟ್ಟು ಭಸ್ಮ

ಕಾರ್ಕಳ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 8 ಎಕರೆ ಪ್ರದೇಶ ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಸಾಣೂರು ಗ್ರಾಮದ ಇಂದಿರಾನಗರ ಪ್ರದೇಶದಲ್ಲಿ ನಡೆದಿದೆ.

ಇಂದಿರಾನಗರ ಪ್ರದೇಶದಲ್ಲಿ ಸುಮಾರು 300ಕ್ಕೂ ಹೆಚ್ಚು ಮನೆಗಳಿದ್ದು, ಸುತ್ತಮುತ್ತಲಿನ ಖಾಲಿ ಜಾಗಗಳಲ್ಲಿ ಹುಲ್ಲು-ಗಿಡಗಳು ದಟ್ಟವಾಗಿ ಬೆಳೆದಿದ್ದವು. ಈ ನಡುವೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕ್ಷಣಾರ್ಧದಲ್ಲೇ ವ್ಯಾಪಿಸಿ ಇಡೀ ಪ್ರದೇಶವನ್ನು ಆವರಿಸಿದ್ದರಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಬಗ್ಗೆ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ದೊರಕುತ್ತಿದ್ದಂತೆಯೇ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *