Breaking
13 Mar 2026, Fri

ಮನೆ ಕಳ್ಳತನ ಪ್ರಕರಣ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಸುಳ್ಯ: ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಶರತ್ ಎಸ್ (24) ಎಂದು ಗುರುತಿಸಲಾಗಿದೆ.

ಮನೆ ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆತನಿಗೆ ಆರು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದ್ದು, ಇನ್ನೊಂದು ಪ್ರಕರಣದಲ್ಲಿ 10 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ಎರಡು ಬಾರಿ ತಲಾ 500 ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 10 ದಿನಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ.

ಇದಕ್ಕೂ ಮುನ್ನ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಶರತ್ ವಿರುದ್ಧ ಮತ್ತೊಂದು ಪ್ರಕರಣವೂ ದಾಖಲಾಗಿದೆ.

Leave a Reply

Your email address will not be published. Required fields are marked *