Breaking
25 Sep 2026, Fri

ಸರಪಾಡಿ ಸರಕಾರಿ ಪ್ರೌಢ ಶಾಲೆ ಉಚಿತ ಟ್ಯೂಷನ್ ಕ್ಲಾಸ್ ತರಬೇತಿಯ ಸಮಾರೋಪ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ.) ಬಂಟ್ವಾಳ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಮೂರು ತಿಂಗಳ ಉಚಿತ ಟ್ಯೂಷನ್ ಕ್ಲಾಸ್ ತರಬೇತಿಯ ಸಮಾರೋಪ ಕಾರ್ಯಕ್ರಮವು ಮಾ. 13 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಪಾಡಿ ಒಕ್ಕೂಟದ ಅಧ್ಯಕ್ಷರಾದ ಗಿರೀಶ್ ವಹಿಸಿದ್ದರು.

ಈ ವೇಳೆ ಶಾಲಾ ಮುಖ್ಯ ಶಿಕ್ಷಕಿ ವಿನೋದಾ ಮಾತಾಡಿ ಹಳ್ಳಿಯ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಉಚಿತ ಟ್ಯೂಷನ್ ಕ್ಲಾಸನ್ನು ಹಮ್ಮಿಕೊಂಡಿರುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಹಕಾರಿಯಾಗಿದೆ. ವೀರೇಂದ್ರ ಹೆಗ್ಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರು ಗ್ರಾಮಭಿವೃದ್ಧಿ ಯೋಜನೆ ಮೂಲಕ ಮಾಡುವ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿ ಎಂದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕ ಭಾಸ್ಕರ್, ಜನಜಾಗೃತಿ ಅಧ್ಯಕ್ಷರಾದ ಪುರುಷೋತ್ತಮ್, ತಾಲೂಕಿನ ಜ್ಞಾನವಿಕಾಸ ಸಮನ್ವಧಿಕಾರಿ ಸವಿತಾ, ಟ್ಯೂಷನ್ ಶಿಕ್ಷಕಿ ಹರ್ಷಿತ, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *