Breaking
21 Jun 2026, Sun

ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ : ಮಹಿಳೆ ಸಾವು

ಉಡುಪಿ: ನಿಟ್ಟೂರು ಬಳಿ ಸ್ಕೂಟರ್‌ ವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಾ. 13 ರಂದು ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಕಟಪಾಡಿ ಮೂಲದ ಹೆಲೆನ್ ಸೋನ್ಸ್ (50) ಎಂದು ಗುರುತಿಸಲಾಗಿದೆ.

ತಾಯಿ ಮತ್ತು ಮಗ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ನಿಟ್ಟೂರು ರಸ್ತೆ ಬದಿಯಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್‌ನ ಹಿಂಭಾಗದಲ್ಲಿ ಕುಳಿತಿದ್ದ ಹೆಲೆನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *