Breaking
23 Dec 2024, Mon

ಫೆಂಗಲ್‌ ಚಂಡಮಾರುತದ ಪರಿಣಾಮ, ನ. 3ರಂದು ದ.ಕ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ ವ್ಯಾಪಕ ಮಳೆಯಾಗುತ್ತಿದ್ದು ಅರೆಂಜ್‌ ಅಲರ್ಟ್‌ ಘೋಷಣೆಯಾದ ಹಿನ್ನಲೆ ಮುಂಜ್ರಾಗತ ಕ್ರಮವಾಗಿ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಥಾಮಿಕ,ಫ್ರೌಡ, ಶಾಲೆ, ಹಾಗೂ ಪದವಿ ಪೂರ್ವ(12ನೇ ತರಗತಿ)ಯವರೆಗೆ ರಜೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಘೋಷಿಸಿದ್ದಾರೆ.

ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂದತೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

‘ಫೆಂಗಲ್’ ಚಂಡಮಾರುತದ ಆರ್ಭಟ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ‘ಫೆಂಗಲ್’ ಚಂಡಮಾರುತದಿಂದಾಗಿ ಕರ್ನಾಟಕ-ಕೇರಳ ಗಡಿಯಲ್ಲಿ ಭಾರೀ ಮಳೆಯಾಗುತ್ತಿದೆ. ಕುಂಬ್ಳೆ ಬಳಿ ರಸ್ತೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರಕೃತಿ ವಿಕೋಪ ಉಂಟಾದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನ ಹೊರವಲಯ ತಲಪಾಡಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಧ್ಯಾಹ್ನದಿಂದ ಶುರುವಾದ ಮಳೆ ಇನ್ನೂ ನಿಂತಿಲ್ಲ. ಆಕಾಶದಲ್ಲಿ ಕಗ್ಗತ್ತಲು ಆವರಿಸಿದ್ದು, ಗುಡುಗು, ಮಿಂಚು, ಭಾರೀ ಗಾಳಿಯಿಂದ ಮನೆಯಿಂದ ಹೊರಗೆ ಬರಲೂ ಜನರು ಯೋಚಿಸುವಂತಾಗಿದೆ.
ಹಾಗೇ, ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಮಂಗಳೂರಿನ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಡಿ. 6ರವರೆಗೆ ಯಾವುದೇ ರೀತಿಯ ಮೀನುಗಾರಿಕೆ ನಡೆಸದಂತೆ ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕರು ಸೂಚನೆ ಹೊರಡಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿರುವುದತಿಂದ ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಮೂಲಕ ಧಾರಾಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ ಬೆಳಗ್ಗೆಯಿಂದ ಉಡುಪಿಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ರಾತ್ರಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ನದಿ, ಸಮುದ್ರ ಪಾತ್ರದ ಜನ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬೀ ಸಮುದ್ರದಲ್ಲಿ ಮೀನುಗಾರರು ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

ತಮಿಳುನಾಡಿನ ಜೊತೆಗೆ ಕೇರಳದಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಗಡಿ ಭಾಗವಾದ ಕೇರಳದ ಕಾಸರಗೋಡಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಕಾಸರಗೋಡು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ನೀಡಲಾಗಿದೆ. ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಕೆ. ಇಂಬುಶೇಖರ್ ಆದೇಶ ಹೊರಡಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯವಾಗಲಿದೆ. ಆದರೆ, ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ.

Leave a Reply

Your email address will not be published. Required fields are marked *