ಬೆಳ್ತಂಗಡಿ: ಶಿರಾಡಿ ಘಾಟಿನ ಗುಂಡ್ಯ ಬಳಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾ. 13 ರಂದು ನಡೆದಿದೆ.

ಮೃತಪಟ್ಟವರನ್ನು ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧರ್ ಮರಕಡ, ಜನಾರ್ದನ ಕೆರಿಮಾರ್ ಸಾವನ್ನಪ್ಪಿದ್ದು ಸುರೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಕಲೇಶಪುರದಲ್ಲಿ ಮದುವೆಗೆ ತೆರಳಿ ಕೊಕ್ಕಡಕ್ಕೆ ವಾಪಸ್ ಬರುತ್ತಿದ್ದ ವೇಳೆ, ಧರ್ಮಸ್ಥಳದಿಂದ ಬೆಂಗಳೂರು ಮೂಲಕ ತಿರುಪತಿಗೆ ತೆರಳುತ್ತಿದ್ದ ರಾಜಹಂಸ ಬಸ್ ಮತ್ತು ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.








