ಉಡುಪಿ: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 13 ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಗೌತಮ್ ಪೂಜಾರಿ ಅವರು ಅವಿವಾಹಿತರಾಗಿದ್ದು ಕ್ಯಾಟರಿಂಗ್ ಸಂಸ್ಥೆಯೊಂದರಲ್ಲಿ ಹೆಡ್ ಕುಕ್ ಆಗಿ ಕೆಲಸ ಮಾಡುತ್ತಿದ್ದರು. ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಅವರು, ಸ್ಥಳೀಯ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

ಇದೀಗ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಶೆಡ್ ಸಮೀಪದಲ್ಲಿ ಹೆಡ್ ಕುಕ್ ಅಡುಗೆ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.








