Breaking
14 Mar 2026, Sat

ಪುತ್ರನ ಅಗಲಿಕೆಯಿಂದ ಮನನೊಂದು ದಂಪತಿಗಳಿಬ್ಬರು ಆತ್ಮಹತ್ಯೆ

ಕಾಸರಗೋಡು: ಪುತ್ರನ ಅಗಲಿಕೆಯಿಂದ ಮನನೊಂದು ದಂಪತಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇಲ್ಪರಂಬ ಪೊಲೀಸ್ ಠಾಣಾ ವ್ಯಾಪ್ತಿಯ ಪೋಯಿನಾಚಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ದಂಪತಿಗಳನ್ನು ಪೋಯಿನಾಚಿ ಪರಂಬ ನಿವಾಸಿಗಳಾದ ವೇಣುಗೋಪಾಲನ್ ನಾಯರ್ (55) ಮತ್ತು ಅವರ ಪತ್ನಿ ಸ್ಮಿತಾ (45) ಎಂದು ಗುರುತಿಸಲಾಗಿದೆ.

ಕಳೆದ ಎರಡು ತಿಂಗಳ ಹಿಂದೆಯಷ್ಟೇ ರೈಲು ಢಿಕ್ಕಿಯಾಗಿ ಇವರ ಏಕೈಕ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಎಂ. ಶಿವನಂದನ್ (19) ಮೃತಪಟ್ಟಿದ್ದರು. ಮಗನ ಅಕಾಲಿಕ ಮರಣದ ನಂತರ ದಂಪತಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಮಾ. 13 ರಂದು ಬೆಳಿಗ್ಗೆ 9 ಗಂಟೆಯಾದರೂ ಮನೆಯ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ನೆರೆಹೊರೆಯವರು ಪರಿಶೀಲಿಸಿದಾಗ, ದಂಪತಿ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಮೇಲ್ಪರಂಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *