Breaking
14 Mar 2026, Sat

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳು ಪೊಲೀಸ್ ವಶಕ್ಕೆ

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೋಡಿನ ಮಂಜೇಶ್ವರ ತಾಲೂಕಿನ ಉಪ್ಪಳದ ಶೇಕ್ ಅರ್ಬಾಜ್ ಮತ್ತು ರಶೀದ್ ಆಲ್ವಿನ್ ಎಂದು ಗುರುತಿಸಲಾಗಿದೆ.

ಮಾ.12 ರಂದು ಉಳ್ಳಾಲ ತಾಲೂಕು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗ್ರೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಮೂವರು ವ್ಯಕ್ತಿಗಳು ಗಾಂಜಾವನ್ನು ತಂದು ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು ಇನ್ನೋರ್ವ ಆರೋಪಿ ಅಲ್ತಾಫ್ ಎಂಬಾತ ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿಗಳಿಂದ 51,500 ರೂಪಾಯಿ ಬೆಲೆ ಬಾಳುವ ಒಂದು ಕೆ.ಜಿ. 110 ಗ್ರಾಂ ತೂಕದ ಗಾಂಜಾ ಮತ್ತು ನಗದು 520 ರೂಪಾಯಿ, ಎರಡು ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *