Breaking
21 Jun 2026, Sun

ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ ಶ್ರೀನಿವಾಸ್ ಅವರ ಆಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಉಡುಪಿ: ಜಿಲ್ಲಾ ಅಬಕಾರಿ ಉಪ ಆಯುಕ್ತ (ಡಿಸಿ) ಶ್ರೀನಿವಾಸ್ ಟಿ.ಎಂ. ಅವರಿಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕರ್ನಾಟಕದಾದ್ಯಂತ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆ ಕೈಗೊಂಡಿರುವ ಲೋಕಾಯುಕ್ತ ಅಧಿಕಾರಿಗಳು ಮಾ. 11ರಿಂದ 12ರವರೆಗೆ ಎರಡು ದಿನಗಳ ಕಾಲ ಸುದೀರ್ಘ ಕಾರ್ಯಾಚರಣೆ ನಡೆಸಿ ಶ್ರೀನಿವಾಸ್ ಅವರಿಗೆ ಸೇರಿದ ಒಟ್ಟು 15 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಈ ವೇಳೆ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ 11 ನಿವೇಶನಗಳು, ಆರು ವಸತಿ ಮನೆಗಳು ಹಾಗೂ 31 ಎಕರೆ ಕೃಷಿ ಭೂಮಿ ಪತ್ತೆಯಾಗಿವೆ.

ಶೋಧದ ವೇಳೆ ₹3,95,941 ನಗದು, ಸುಮಾರು ₹1,47,50,506 ಮೌಲ್ಯದ ಚಿನ್ನಾಭರಣಗಳು, ₹17,00,000 ಮೌಲ್ಯದ ವಾಹನಗಳು, ₹25,75,000 ಬ್ಯಾಂಕ್ ಠೇವಣಿ ಹಾಗೂ ₹72,68,554 ಮೌಲ್ಯದ ಇತರ ಬೆಲೆಬಾಳುವ ವಸ್ತುಗಳು ಕೂಡ ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *