Breaking
25 Sep 2026, Fri

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಇಲ್ಲ: ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ

ಮಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಬಳಕೆಯ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ ವ್ಯವಸ್ಥೆಯಂತೆ ಪ್ರತಿ 25 ದಿನಗಳಿಗೊಮ್ಮೆ ಒಂದು ಸಿಲಿಂಡರ್‌ನಂತೆ ಗೃಹಬಳಕೆಯ ಎಲ್‌ಪಿಜಿ ಪೂರೈಕೆ ಮುಂದುವರಿದಿದೆ. ಸಾರ್ವಜನಿಕರು ಆತಂಕಪಡಬೇಕಾದ ಅಗತ್ಯವಿಲ್ಲ ಹಾಗೂ ಒಂದೇ ಸಮಯದಲ್ಲಿ ಹೆಚ್ಚಿನ ಸಿಲಿಂಡರ್‌ಗಳನ್ನು ಕಾಯ್ದಿರಿಸಲು ಪ್ರಯತ್ನಿಸಬಾರದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಈಗಿನ ನಿಯಮಾವಳಿಗಳ ಪ್ರಕಾರ ಹೆಚ್ಚುವರಿ ಬುಕ್ಕಿಂಗ್‌ಗೆ ಅವಕಾಶವಿಲ್ಲ. ಹಾಗೆಯೇ ಅನಿಲ ಏಜೆನ್ಸಿಗಳು ದಾಸ್ತಾನು ಕೇಂದ್ರಗಳಲ್ಲಿ ಹೆಚ್ಚುವರಿ ಸಿಲಿಂಡರ್ ಸಂಗ್ರಹಿಸದಂತೆ ಕಠಿಣ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು, ಹಾಸ್ಟೆಲ್‌ಗಳು, ವಸತಿ ಶಾಲೆಗಳು, ಸೇರಿದಂತೆ ಕಾರಾಗೃಹಗಳಿಗೆ ಎಲ್‌ಪಿಜಿ ಪೂರೈಕೆ ಯಾವುದೇ ವ್ಯತ್ಯಯವಿಲ್ಲದೆ ಮುಂದುವರಿಯಲಿದೆ. ದೇವಾಲಯ, ಚರ್ಚ್ ಮತ್ತು ಮಸೀದಿಗಳಲ್ಲಿಯೂ ಎಲ್‌ಪಿಜಿ ಪೂರೈಕೆ ನಿರಂತರವಾಗಿರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Leave a Reply

Your email address will not be published. Required fields are marked *