Breaking
14 Mar 2026, Sat

ಎರಡು ಬೈಕ್‌ಗಳ ನಡುವೆ ಡಿಕ್ಕಿ: ಸವಾರ ಸಾವು

ಬಂಟ್ವಾಳ: ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಸವಾರನೋರ್ವ ಮೃತಪಟ್ಟ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಎಂದು ಗುರುತಿಸಲಾಗಿದೆ.

ಮಾ. 13ರಂದು ರಾತ್ರಿ ಪಾಣೆಮಂಗಳೂರು ಸಮೀಪ ಎರಡು ಬೈಕ್‌ಗಳ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ಅತ್ಯುತ್ತಮ ವಿಡಿಯೋಗ್ರಾಫರ್ ಹಾಗೂ ಛಾಯಾಗ್ರಾಹಕರಾಗಿದ್ದು, ಸಂಘದ ಬಂಟ್ವಾಳ ವಲಯದ ಸಕ್ರಿಯ ಸದಸ್ಯರಾಗಿದ್ದರು.

Leave a Reply

Your email address will not be published. Required fields are marked *