Breaking
17 Mar 2026, Tue

ಟೆಂಪೋ ಮತ್ತು ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಟೆಂಪೋ ಚಾಲಕ ಸ್ಥಳದಲ್ಲೇ ಸಾವು

ಮೂಡಬಿದಿರೆ: ಮಿನಿ ಗೂಡ್ಸ್‌ ಟೆಂಪೋ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾರ್ಕಳ – ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಬಳಿ ಮಾ. 16 ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು 30 ವರ್ಷದ ಲೆಸ್ಟರ್ ಡೇವಿಡ್ ಡಿ’ಸೋಜಾ ಎಂದು ಗುರುತಿಸಲಾಗಿದೆ .

ಕಾರ್ಕಳದಿಂದ ಮೂಡುಬಿದಿರೆಯ ಕಡೆಗೆ ಸಾಗುತ್ತಿದ್ದ ಮಿನಿ ಗೂಡ್ಸ್ ಟೆಂಪೋ , ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಟೆಂಪೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *