Breaking
21 Sep 2026, Mon

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಡುಪಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಾ. 16 ರಂದು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಪ್ಪಿನಂಗಡಿಯ ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಆರೀಫ್ ಎಂದು ಗುರುತಿಸಲಾಗಿದೆ.

ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ವಿರುದ್ದ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಕೊಯಿಲದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯಾಯಾಲಯವು ಬಂಧಿತ ಆರೋಪಿಯನ್ನು ಮಾ. 28 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *