Breaking
17 Mar 2026, Tue

ದ್ವಿ ಚಕ್ರ ವಾಹನಕ್ಕೆ ಕಾರು ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ಓರ್ವ ಬಾಲಕಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಾ. 16ರಂದು ಕಲ್ಲೇರಿ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸುಹೈರಾ(5) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡವರನ್ನು ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಸಾಜಿರಾ (33) ಹಾಗೂ ಇಸ್ಮಾಯಿಲ್ (60) ಎಂದು ತಿಳಿದುಬಂದಿದೆ.

ಇಸ್ಮಾಯಿಲ್ ಅವರು ದ್ವಿ ಚಕ್ರ ವಾಹನದಲ್ಲಿ ತಮ್ಮ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾಳನ್ನು ಕೂರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ವೇಣೂರು ಮೂಲದ ಶಿವಪ್ರಸಾದ್ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಗಂಭೀರ ಗಾಯಗೊಂಡ ಸುಹೈರಾ ಚಿಕಿತ್ಸೆ ಫಲಕಾರಿಯಾದೇ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *