Breaking
21 Sep 2026, Mon

ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

ಮಂಗಳೂರು: ನಗರದ ಬೋಳಾರದ ಮುಳಿಹಿತ್ತಲು ಬಳಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಕಸವನ್ನು ಸ್ವಚ್ಛಗೊಳಿಸುವ ವೇಳೆ ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಘಟನೆ ನಡೆದಿದೆ.

ಬೆಳಗಾವಿಯ ಸವದತ್ತಿ ತಾಲೂಕಿನ ಪಂಚಪ್ಪ(44) ಅವರು ಬಾವಿಯ ಸುತ್ತಮುತ್ತಲಿನ ಕಸವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಹಗ್ಗ ತುಂಡಾಗಿ ಬಾವಿಗೆ ಬಿದ್ದಿದ್ದಾರೆ.

ಬಾವಿಗೆ ಬಿದ್ದ ಅವರನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಹಾಗು ಸಿಬ್ಬಂದಿ ಬಾವಿಗೆ ಇಳಿದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *