Breaking
21 Jun 2026, Sun

ಬಾವಿಗೆ ಬಿದ್ದ 2 ವರ್ಷದ ಮಗುವಿನ ರಕ್ಷಣೆ

ಕಾರವಾರ: ಆಕಸ್ಮಿಕವಾಗಿ ಬಾವಿಗೆ ಬಿದ್ದ 2 ವರ್ಷದ ಮಗುವನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ.

ಭುವಿ (2) ಎಂಬ ಬಾಲಕಿ ಬಾವಿಗೆ ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಬಾಲಕಿಯಾಗಿದ್ದಾಳೆ.

ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಮಗು ಕಾಣೆಯಾಗಿದ್ದು, ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಬಳಿಕ ಬಾವಿಯ ಹತ್ತಿರ ಹೋಗಿದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಆತಂಕದಿಂದ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ನೀರಿಗೆ ಇಳಿಸಲಾದ ಪಂಪ್ ಪೈಪ್‌ನ್ನು ಗಟ್ಟಿಯಾಗಿ ಹಿಡಿದುಕೊಂಡು ಅಳುತ್ತಿರುವುದು ಕಂಡುಬಂದಿದೆ.

ವಿಷಯ ತಿಳಿದ ತಕ್ಷಣ ಹತ್ತಿರದಲ್ಲೇ ವಾಸವಿರುವ ಪಯಾಜ್ ಚೌಟಿ ಸ್ಥಳಕ್ಕೆ ಧಾವಿಸಿ, ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

Leave a Reply

Your email address will not be published. Required fields are marked *