Breaking
18 Mar 2026, Wed

ಭೂ ವ್ಯವಹಾರ ವೈಷಮ್ಯ: ಕಾರಿನಿಂದ ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಕೊಲೆ ಯತ್ನ

ಮಂಗಳೂರು: ಭೂವ್ಯವಹಾರದಲ್ಲಿ ವೈಷಮ್ಯ ಉಂಟಾಗಿ ಸಿಟ್ಟಿಗೆದ್ದ ವ್ಯಕ್ತಿಯೊಬ್ಬನು ಕಾರಿನಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಕೊಲೆ ಯತ್ನ ಮಾಡಿದ ಘಟನೆ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಮಲ್ಲಿಕಟ್ಟೆ ನಿವಾಸಿ ಮೋಹನ್ ದಾಸ್ ಶೆಟ್ಟಿ (56) ಎಂದು ತಿಳಿದುಬಂದಿದೆ.

ಸುರತ್ಕಲ್ ಹಾಗೂ ವಾಮಂಜೂರು ಪ್ರದೇಶಗಳಲ್ಲಿ ಸುಮಾರು 2 ಕೋಟಿ ರೂ. ಹೂಡಿಕೆ ಮಾಡಿದ್ದ ವಿಚಾರವಾಗಿ ಇಬ್ಬರ ಮಧ್ಯೆ ವೈಷಮ್ಯ ಉಂಟಾಗಿತ್ತು. ಮಾ. 17 ರಂದು ನಗರದ ಆರ್ಯ ಸಮಾಜ ರಸ್ತೆಯ ಬಳಿ ಇಬ್ಬರ ನಡುವೆ ಮಾತುಕತೆ ನಡೆದಿತ್ತು.

ಈ ವೇಳೆ ಆರೋಪಿಯು ಮೋಹನ್ ದಾಸ್ ಅವರ ಮೊಬೈಲ್‌ನ್ನು ಆರೋಪಿ ಕಸಿದುಕೊಂಡಿದ್ದಾನೆ. ಬಳಿಕ ಮೋಹನ್ ದಾಸ್ ಶೆಟ್ಟಿ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಆರೋಪಿಯು ತನ್ನ ಇನೋವಾ ಕ್ರಿಸ್ಟಾ ಕಾರನ್ನು ಅತಿವೇಗದಲ್ಲಿ ಚಲಾಯಿಸಿ, ಹಿಂಬದಿಯಿಂದ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆನಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *