Breaking
21 Jun 2026, Sun

ಕಲ್ಲಡ್ಕದಲ್ಲಿ ಮಾ. 20ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮವು ಮಾ. 20 ರಂದು ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಮಾ. 17 ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ತಿಳಿಸಿದ್ದಾರೆ.

ಬಳಿಕ ಮಾತಾನಾಡಿದ ಅವರು ವಸಾಹತು ಮನೋಭಾವದಿಂದ ಭಾರತೀಯತೆನಡೆಗೆ – ಒಂದು ಚಿಂತನೆ ಎಂಬ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದರು.

ಅಜಾದ್‌ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು TV9 ಕನ್ನಡದ ನಿರೂಪಕ ಹಾಗೂ ಸಂಪಾದಕರಾಗಿರುವ ರಂಗನಾಥ್ ಭಾರದ್ವಾಜ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಾಗೂ ಶ್ರೀ ರಾಮ ವಿದ್ಯಾ ಕೇಂದ್ರದ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಮೊದಲ ಗೋಷ್ಠಿಯಲ್ಲಿ “ಭಾಷೆ, ಧರ್ಮ, ಸಂಸ್ಕೃತಿ ಮತ್ತು ಆಚರಣೆಗಳ ಮೇಲೊಂದು ಇಣುಕುನೋಟ ಎಂಬ ವಿಷಯದ ಬಗ್ಗೆ ಪ್ರಾಧ್ಯಾಪಕಿ ಡಾ.ಆರತಿ ವಿ.ಬಿ ಮಾತನಾಡಲಿದ್ದಾರೆ.

ಎರಡನೇ ಗೋಷ್ಠಿಯಲ್ಲಿ ಆಡಳಿತ ಮತ್ತು ನ್ಯಾಯಾಂಗದ ವ್ಯವಸ್ಥೆ ವಸಾಹತುಭಾವದಿಂದ ಮುಕ್ತವಾಗುವತ್ತ” ಎಂಬ ವಿಷಯದ ಬಗ್ಗೆ ಮಾಜಿ ಶಾಸಕ ರಾಜೀವ ಕುಡಚಿ ವಿಚಾರ ಮಂಡಿಸಲಿದ್ದಾರೆ.

ಮೂರನೇ ಗೋಷ್ಠಿಯಲ್ಲಿ “ಶಿಕ್ಷಣ,ಇತಿಹಾಸದ ಮೇಲೊಂದು ಚರ್ಚೆ ” ಎಂಬ ವಿಷಯದ ಬಗ್ಗೆ ಚಿಂತಕ ರೋಹಿತ್ ಚಕ್ರತೀರ್ಥ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ವಿಚಾರ ಮಂಡಿಸಲಿದ್ದಾರೆ ಹಾಗೂ
ನಾಲ್ಕನೇ ಗೋಷ್ಠಿಯಲ್ಲಿ ಮುಕ್ತಚಿಂತನೆ ಮತ್ತು ಸಮಾರೋಪದಲ್ಲಿಅ ಖಿಲ ಭಾರತೀಯ ಟೋಳಿ ಸದಸ್ಯ ರಘುನಂದನ್ ಅವರು ಮಾತನಾಡಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ನಾರಾಯಣ ಸೋಮಯಾಜಿ, ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಸಂಸ್ಥೆಯ ಸಂಚಾಲಕಿ ಲಕ್ಷ್ಮೀ ರಘುರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *