ಉಡುಪಿ: ಸಂತೆಕಟ್ಟೆ ಬಳಿ ಕಾರು ಮತ್ತು ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಾ. 18 ರಂದು ನಡೆದಿದೆ.

ಕುಂದಾಪುರ ದಿಕ್ಕಿನಿಂದ ತಪ್ಪು ಬದಿಯಲ್ಲಿ ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಟೊಯೋಟಾ ಎಟಿಯೋಸ್ ಕಾರನ್ನು ಹಿಂದಿಕ್ಕಲು ಯತ್ನಿಸಿದೆ. ಈ ವೇಳೆ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ನಿವಾಸಿಗಳು ಮತ್ತು ಸಾರ್ವಜನಿಕರು ಧಾವಿಸಿ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಿದರು. ಬಳಿಕ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಯಿತು.






