ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನೋರ್ವ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ಬಳಿಯ ಅರಸಮಜಲು ಎಂಬಲ್ಲಿ ಮಾ. 18 ರಂದು ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ.

ನೇತ್ರಾವತಿ ನದಿಗೆ ಈಜಲು ಇಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.







