Breaking
19 Mar 2026, Thu

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೋಟೆಕಾರು ಪೋಸ್ಟ್ ನಿವಾಸಿ ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದೆ.

9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ. ಅಲ್ಲದೆ, ಬಾಲಕನಿಗೆ ಅಶ್ಲೀಲ ವಿಡಿಯೋ ತೋರಿಸಿ ಅಸಭ್ಯ ಕೃತ್ಯಗಳಿಗೆ ಪ್ರೇರೇಪಿಸಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *