Breaking
22 Sep 2026, Tue

ಅಕ್ರಮ ಕೋಳಿ ಅಂಕ ಅಡ್ಡೆಗೆ ದಾಳಿ: 6 ಮಂದಿ ಬಂಧನ

ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದರೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮಾ. 18 ರಂದು ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಪ್ರದೇಶದಲ್ಲಿ ಜಾತ್ರೆ ಮುಗಿದ ಬಳಿಕ ಕೆಲವು ವ್ಯಕ್ತಿಗಳು ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದರು. ದಾಳಿಯ ವೇಳೆ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕೋಳಿಗಳಿಗೆ ಹರಿತವಾದ ಬಾಳುಗಳನ್ನು ಕಟ್ಟಿ, ಹಿಂಸಾತ್ಮಕವಾಗಿ ಕಾದಾಡಲು ಬಿಡಲಾಗುತ್ತಿದ್ದು, ಹಣವನ್ನು ಪಣವಾಗಿ ಇಟ್ಟು ಜೂಜಾಟ ನಡೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆರೋಪಿಗಳಿಂದ ಕೋಳಿ ಅಂಕಕ್ಕೆ ಬಳಸಲಾಗಿದ್ದ 17 ಜೀವಂತ ಕೋಳಿಗಳು, ಎರಡು ಬಾಳುಗಳು ಹಾಗೂ 1,480 ರೂ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುರಿತು ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *