Breaking
22 Sep 2026, Tue

ಉಜಿರೆ ಜಾತ್ರೆ ನೋಡಲು ಬಂದಿದ್ದ ಬಾಲಕನ ಬಜರಂಗದಳದ ಕಾರ್ಯಕರ್ತರ ಗುಂಪಿನಿಂದ ಹಲ್ಲೆ ಆರೋಪ, ದೂರು ದಾಖಲು

ಬೆಳ್ತಂಗಡಿ : ಜಾತ್ರೆ ನೋಡಲು ಬಂದಿದ್ದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ ಬಳಿಕ ಅಪಹರಿಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾರ್ಚ್ 11 ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಸಂತ್ರಸ್ತ ಬಾಲಕ ತನ್ನ ಸ್ನೇಹಿತರೊಂದಿಗೆ ಜಾತ್ರೆ ನೋಡಲು ಹಿಂದೂ ಸ್ನೇಹಿತರ ಜೊತೆ ಬಂದಿದ್ದ.

ಈ ವೇಳೆ ಸ್ಥಳಕ್ಕೆ ಬಂದ ಯುವಕರ ಗುಂಪು, ಹಿಂದೂ ಹುಡುಗಿಯರನ್ನು ಲಾಡ್ಜ್ ಗೆ ಕರೆದೊಯ್ಯುತ್ತಿದ್ದೀಯಾ? ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದೆ. ಅಲ್ಲದೆ, ಬಾಲಕನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಹಲ್ಲೆಯ ಬಳಿಕ ಬಾಲಕನನ್ನು ಬಲವಂತವಾಗಿ ಅಪಹರಿಸಿದ ಆರೋಪಿಗಳು, ಮೊಬೈಲ್‌ ನಲ್ಲಿ ಬಲವಂತವಾಗಿ ವಿಡಿಯೋ ರೆಕಾರ್ಡಿಂಗ್ ಮಾಡಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತ ಬಾಲಕ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಎಸ್ಪಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಈಗಾಗಲೇ ವಿಶೇಷ ತಂಡವನ್ನು ರಚಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

Leave a Reply

Your email address will not be published. Required fields are marked *