ಮಂಗಳೂರು: ಹಿಂಸಾತ್ಮಕವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ದನಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪರಿಶೀಲನೆ ವೇಳೆ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಐದು ದನಗಳನ್ನು ಸಾಗಾಟ ಮಾಡಲಾಗುತ್ತಿರುವುದು ಪತ್ತೆಯಾಗಿದೆ.






