Breaking
20 Jun 2026, Sat

ತಲೆನೋವಿನ ಔಷಧ ಸೇವನೆ: 10 ವರ್ಷದ ಬಾಲಕ ಸಾವು

ಕಡಬ: 10 ವರ್ಷದ ಬಾಲಕನೋರ್ವ ತಲೆನೋವಿನ ಔಷದ ಸೇವಿಸಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತಪಟ್ಟ ಬಾಲಕನನ್ನು ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ಪುತ್ರ ಎಂದು ಗುರುತಿಸಲಾಗಿದೆ.

ಬಾಲಕನು ಪದೇ ಪದೇ ತಲೆನೋವಿನಿಂದ ಬಳಲುತ್ತಿದ್ದನು. ಮಾ.18 ರಂದು ಸಂಜೆ, ತಲೆನೋವಿಗಾಗಿ ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ್ದಾನೆ. ಬಳಿಕ ಅವನು ಮನೆಯಲ್ಲಿ ಅಸ್ವಸ್ಥಗೊಂಡು ಹೊರಳಾಡುತ್ತಿದ್ದದನ್ನು ಗಮನಿಸಿದ ತಾಯಿ ಗಂಡನಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಮನೆಗೆ ಬಂದ ತಂದೆ, ಮಗನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ದಾಖಲಿಸಲಾಗಿದೆ. ಆದರೆ ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನ ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *