Breaking
22 Sep 2026, Tue

ಈಜಲು ಹೋಗಿದ್ದ ವ್ಯಕ್ತಿ ಕ್ವಾರಿ ಹೊಂಡದಲ್ಲಿ ಮುಳುಗಿ ಸಾವು

ಬ್ರಹ್ಮಾವರ: ತಾಲೂಕಿನ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗರಿಕೆ ಮಠ ಪ್ರದೇಶದಲ್ಲಿ ಪಾಳುಬಿದ್ದ ಕಲ್ಲು ಕ್ವಾರಿಯ ನೀರಿನ ಹೊಂಡದಲ್ಲಿ ಈಜಲು ಹೋಗಿದ ವ್ಯಕ್ತಿಯೊಬ್ಬರು ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ತಮಿಳುನಾಡು ಮೂಲದ ಅರುಣ್ (38) ಎಂದು ಗುರುತಿಸಲಾಗಿದೆ.

ಮಾ.19 ರಂದು ಮಧ್ಯಾಹ್ನ ಅರುಣ್ ಅವರು ಗರಿಕೆ ಮಠದ ಬಳಿಯಿರುವ ಆಳವಾದ ಕ್ವಾರಿ ಹೊಂಡಕ್ಕೆ ಈಜಲು ಇಳಿದಿದ್ದರು. ಈ ವೇಳೆ ನೀರಿನ ಆಳದ ಅರಿವಿಲ್ಲದೆ ಹೊಂಡದ ಮಧ್ಯಭಾಗಕ್ಕೆ ತೆರಳಿದ ಅವರು ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *