ಉಡುಪಿ: ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಬಳಿ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ. 19 ರಂದು ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ.

ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ತೆರಳುತ್ತಿದ್ದ ವೇಳೆ, ಹಿಂದಿನಿಂದ ಅತೀವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಚಕ್ರ ಸವಾರನ ತಲೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೆಲ್ಮೆಟ್ ಧರಿಸಿದ್ದರೂ ಕೂಡ ಗಂಭೀರವಾಗಿ ಗಾಯಗೊಂಡ ಅವರು ಪ್ರಾಣ ಕಳೆದುಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





