ಕೌಟುಂಬಿಕ ಕಲಹ : ಪತಿಯಿಂದಲೇ ಪತ್ನಿಯ ಕೊಲೆ, ಪತಿ ಆತ್ಮಹತ್ಯೆಗೆ ಯತ್ನ

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಪತಿಯೇ ಪತ್ನಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು(ಮಾ. 20) ನಡೆದಿದೆ.

ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದ್ದು ಹಾಗೂ ಆರೋಪಿ ಪತಿಯನ್ನು ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹದ ಹಿನ್ನಲೆ ದಂಪತಿಗಳ ನಡುವೆ ಜಗಳ ಉಂಟಾಗಿ ಅದು ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಬಳಿಕ ಆತ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ

ಘಟನೆಯ ಮಾಹಿತಿ ತಿಳಿದ ತಕ್ಷಣ ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *