Breaking
21 Jun 2026, Sun

ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕು ಇದರ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮೂರು ತಿಂಗಳುಗಳ ಕಾಲ ನಡೆದ ಉಚಿತ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭವು ಭಂಡಾರಿಬೆಟ್ಟು ವ್ಯಾಯಾಮ ಶಾಲೆಯಲ್ಲಿ ಮಾರ್ಚ್.20 ಶುಕ್ರವಾರ ಜರಗಿತು.

ಬಂಟ್ವಾಳ ಪುರಸಭೆಯ ನಿಕಟ ಪೂರ್ವ ಸದಸ್ಯರಾದ ಹರಿಪ್ರಸಾದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಿಳೆಯರ ಸಬಲೀಕರಣದ ಕುರಿತು ಮಾತನಾಡಿ ಮಹಿಳಾ ಜಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನಡೆಯುವ ಕಾರ್ಯಕ್ರಮಗಳು ಉತ್ತಮ ವೇದಿಕೆ ಯಾಗಿದೆ.ಮೂರು ತಿಂಗಳುಗಳ ಕಾಲ ಉಚಿತವಾಗಿ ಪಡೆದುಕೊಂಡ ತರಬೇತಿಯಿಂದ ಸ್ವಾವಲಂಬಿಗಳಾಗಿ ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೊನಾಲ್ಡ್ ವಹಿಸಿದ್ದರು.

ಬಂಟ್ವಾಳ ತಾಲೂಕು ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜಯನಂದ.ಪಿ ಮಾತಾಡಿ ನಮ್ಮಲ್ಲಿ ಇರುವ ವಿದ್ಯೆಯನ್ನು ನಾವು ಸರಿಯಾಗಿ ಬಳಸಿದಾಗ ಯಶಸನ್ನು ಕಾಣಬಹುದು ಎಂದರು
ನಂತರ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಗಿರೀಶ್, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸವಿತಾ, ತರಬೇತಿ ಶಿಕ್ಷಕಿ ವಸಂತಿ, ಒಕ್ಕೂಟದ ಅಧ್ಯಕ್ಷರಾದ ವಿಜಯ, ಸೇವಾ ಪ್ರತಿನಿಧಿ ವನಿತಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *