ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಎ.ಜೆ ಆಸ್ಪತ್ರೆ ಕುಂಟಿಕಾನ ಮಂಗಳೂರು, ಹಾಗೂ ಕಾಡಬೆಟ್ಟು ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸಹಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ಇಲ್ಲಿ ಮಾ. 22 ರಂದು ಜರಗಿತು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಕಾಡಬೆಟ್ಟು ಇದರ ಅಧ್ಯಕ್ಷರಾದ ಉಮೇಶ್ ವಹಿಸಿದ್ದರು.
ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಮೋದ್ ರೈ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಜಿಲ್ಲಾ ನಿರ್ದೇಶಕ ನಿರ್ದೇಶಕರಾದ ದಿನೇಶ್ ಡಿ ಮಾತಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಪೂಜ್ಯರು ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಮಾದರಿ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಜ್ಞಾನವಿಕಾಸದ ಕಾರ್ಯಕ್ರಮದ ಅಡಿಯಲ್ಲಿ ಪ್ರತಿ ತಿಂಗಳು ಮಹಿಳೆಯರಿಗೆ ಆರೋಗ್ಯದ ಅರಿವಿನ ಬಗ್ಗೆ ಬೇರೆ ಬೇರೆ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಹಾಗೂ ಪ್ರಯೋಜನವನ್ನು ಪಡೆದುಕೊಳ್ಳಿ ಎಂದರು.

ಈ ಸಂದರ್ಭ ಕಾರಿಂಜೇಶ್ವರ ದೇವಸ್ಥಾನದ ಅಧ್ಯಕ್ಷರಾದ ವೀರೇಂದ್ರ ಅಮೀನ್, ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಾನಂದ, ಹಾಸನದ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಜನಜಾಗೃತಿ ವೇದಿಕೆ ಸದಸ್ಯರಾದ ಪ್ರವೀಣ್, ವಗ್ಗ ವಲಯದ ಮೇಲ್ವಿಚಾರಕ ಸುರೇಶ್, ಜ್ಞಾನ ದೀಪ,ಶಿಕ್ಷಕಿ ಹರಿಣಾಕ್ಷಿ, ಒಕ್ಕೂಟದ ಪದಾಧಿಕಾರಿಗಳು, ಕಾಡಬೆಟ್ಟು ಶೌರ್ಯ ಘಟಕದ ಸದಸ್ಯರು, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಈ ವೇಳೆ ಉಚಿತ ಆರೋಗ್ಯ ಶಿಬಿರದಲ್ಲಿ ಬಿ ಪಿ, ಶುಗರ್, ಇಸಿಜಿ, ಸ್ತ್ರೀ ತಪಾಸಣೆ, ಕಣ್ಣಿನ ತಪಾಸಣೆ ಮಾಡಲಾಯಿತು.
ಸೇವಾ ಪ್ರತಿನಿಧಿ ರೇಖಾ ಪ್ರಾರ್ಥಿಸಿ, ಲೀಲಾವತಿ ಸ್ವಾಗತಿಸಿ, ರಾಮಕೃಷ್ಣ ಪ್ರಭು ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು .




