Breaking
24 Jun 2026, Wed

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವು

ಮೂಡಬಿದಿರೆ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ದಂಪತಿಯ ಪುತ್ರ ಸಾತ್ವಿಕ್ ಕುಲಾಲ್ (21) ಎಂದು ಗುರುತಿಸಲಾಗಿದ್ದು, ಅವರು ಇಂಜಿನಿಯರಿಂಗ್‌ ವಿದ್ಯಾರ್ಥಿನಿಯಾಗಿದ್ದರು ಎಂದು ತಿಳಿದುಬಂದಿದೆ.

ಕಳೆದ ವರ್ಷದ ಅಕ್ಟೋಬರ್ ನಲ್ಲಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಗಂಭೀರ ಗಾಯಗೊಂಡ ಸಾತ್ವಿಕ್‌ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ತಿಂಗಳುಗಳಿಂದ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು, ಚಿಕಿತ್ಸೆಗೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *