Breaking
21 Mar 2026, Sat

ಬಂಟ್ವಾಳ ವಕೀಲರ ಸಂಘ ದ ವತಿಯಿಂದ ವಕೀಲರ ಹಾಗೂ ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಗಾರ

ಬಂಟ್ವಾಳ: ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ – ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ – ಬಂಟ್ವಾಳ ಘಟಕ ಇವರ ಜಂಟಿ ಅಶ್ರಯದಲ್ಲಿ ಸಂವಿಧಾನ ದಿನಾಚರಣೆ ಮತ್ತು ವಕೀಲರ ದಿನಾಚರಣೆ ಯ ಪ್ರಯುಕ್ತ ಕಾನೂನು ಕಾರ್ಯಗಾರವನ್ನು ದಿನಾಂಕ 3/12/2024ನೇ ಮಂಗಳವಾರ ಸಂಜೆ ಗಂಟೆ 4.00 ಗೆ ಸರಿಯಾಗಿ ಜೆ ಎಂ ಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಭಾಗ್ಯಮ್ಮ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ದಲ್ಲಿ ಕಾರ್ಕಳದ ಹಿರಿಯ ನ್ಯಾಯವಾದಿ ಎಂ ಕೆ ವಿಜಯ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಗಾರದಲ್ಲಿ ಭಾಗವಹಿಸಿ ಪ್ರೊಫೆಸನಲ್ ಏಥಿಕ್ಸ್ ನ ಬಗ್ಗೆ ತಮ್ಮ ಅಪಾರ ಅನುಭವ ಮತ್ತು ಹಿರಿತನದ ಅನುಭವಗಳನ್ನು ಸೇರಿಸಿ ಕಾರ್ಯಗಾರವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ಕೃಷ್ಣಮೂರ್ತಿ. ಏನ್ ಹಾಗೂ ಅಧಿವಕ್ತಾ ಪರಿಷತ್ ಬಂಟ್ವಾಳದ ಅಧ್ಯಕ್ಷರು ಶ್ರೀಮತಿ ಉಮಾ ಏನ್ ಸೋಮಯಾಜಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಲ್ಲಿ ಅಧಿವಕ್ತಾ ಪರಿಷತ್ ನ ಸಮಾಜಿಕ ಕಾರ್ಯದ ಅಂಗವಾಗಿ ವಕೀಲರ ದಿನಾಚರಣೆಯ ಪ್ರಯುಕ್ತ ಶ್ರೀ ಮಾತಾ ಲಕ್ಷಣಿ ಶಾಂತಿಧಾಮ ಆಶ್ರಮ ಅರ್ಕುಳ, ಪರಂಗಿಪೇಟೆ ಆಶ್ರಮಕ್ಕೆ 32,000/ ಮೌಲ್ಯದ ಫ್ರಿಜ್ ನ್ನು ಆಶ್ರಮದ ಸ್ಥಾಪಕರಾದ ಹರೀಶ್ ಪೆರ್ಗಡೆ ಯವರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಎಂ ಕೆ ವಿಜಯ್ ಕುಮಾರ್ ಅವರನ್ನು ವಕೀಲರ ಸಂಘ (ರಿ) ಬಂಟ್ವಾಳದ ವತಿಯಿಂದ ಸನ್ಮಾನಿಸಿ ಗೌರವಿಸಿಲಾಯಿತು.

ವಕೀಲರ ಸಂಘ (ರಿ), ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಅತಿಥಿ ಅಭ್ಯಾಗತರನ್ನು ಯುವ ವಕೀಲರು ಅದ ಸ್ವರ್ಣ ಗೌರಿ ಯವರು ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಅಧಿವಕ್ತಾ ಪರಿಷತ್ ನ ಜಿಲ್ಲೆಯ ಸದಸ್ಯರಾದ ವೀರೇಂದ್ರ ಎಂ ಸಿದ್ದಕಟ್ಟೆ ಧನ್ಯವಾದ ಸಲ್ಲಿಸಿದರು. ನಿತಿನ್ ಕುಮಾರ್ ರವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *