ಉಳ್ಳಾಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ದೇರಳಕಟ್ಟೆಯ ಫರಾಜ್ ಯಾನೆ ಮೊಹಮ್ಮದ್ ಫರಾಜ್ (32 ವ) ಎಂದು ಗುರುತಿಸಲಾಗಿದೆ.
ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಸೇರಿದಂತೆ ಒಟ್ಟು 10 ಪ್ರಕರಣಗಳು ದಾಖಲಾಗಿವೆ.

ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಈತನು ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಆರು ವಾರಂಟ್‌ಗಳು ಜಾರಿಯಾಗಿದೆ ಎಂದು ತಿಳಿದುಬಂದಿದೆ.






