Breaking
25 Sep 2026, Fri

ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಎಮ್.ಡಿ.ಎಮ್.ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕೊಣಾಜೆ ಪೊಲೀಸರು ಮಾ. 22 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕು ಕಸಬ ಬೆಂಗ್ರೆ ನಿವಾಸಿ ಮೊಹಮದ್ ಝಾಕೀರ್ (19) ಎಂದು ಗುರುತಿಸಲಾಗಿದೆ.

ಉಳ್ಳಾಲ ತಾಲೂಕು ಬೆಳ್ಮ ಗ್ರಾಮದ ಫಿಜಾ ಮೈದಾನ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೊಣಾಜೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ ಸುಮಾರು ₹1,06,000 ಮೌಲ್ಯದ 10.6 ಗ್ರಾಂ ತೂಕದ ನಿಷೇಧಿತ ಎಮ್‌ಡಿಎಂಎ, ಮೊಬೈಲ್ ಫೋನ್, ತೂಕ ಮಾಪನ ಯಂತ್ರ ಹಾಗೂ ನಂಬರ್ ಪ್ಲೇಟ್ ಇಲ್ಲದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *