Breaking
23 Mar 2026, Mon

ಬಂಟ್ವಾಳದಲ್ಲಿ ಅಗ್ನಿ ಅವಘಡ: ಕಣಿಯೂರು ಕಲೆಂಜಿ ಮಲೆ ಪರಿಸರ ಬೆಂಕಿಗೆ ಆಹುತಿ

ಬಂಟ್ವಾಳ, ಮಾರ್ಚ್ 23 : ಶಾರ್ಟ್ ಸರ್ಕ್ಯೂಟ್ ನಿಂದ ಟ್ರಾನ್ಸ್ ಫಾರ್ಮರ್ ಪೆಟ್ಟಿಗೆಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಅರಣ್ಯ ಪ್ರದೇಶ ಹೊತ್ತಿ ಉರಿದ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಮಸೀದಿ ಸಮೀಪ ಸೋಮವಾರ ಬೆಳಿಗ್ಗೆ ನಡೆದಿದೆ.

ಬೆಂಕಿ ಕಾಣಿಸಿಕೊಂಡ ಪರಿಣಾಮ ಕಣಿಯೂರಿನ ಕಲೆಂಜಿ ಮಲೆ ಪರಿಸರದ ಬಹುತೇಕ ಪ್ರದೇಶಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ. ದಟ್ಟ ಹೊಗೆ ಮತ್ತು ಜ್ವಾಲೆಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಸೃಷ್ಟಿಸಿ ತ್ತು.


ಸ್ಥಳೀಯರು ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *