ವಿಟ್ಲ: ಬೊಬ್ಬೆಕೇರಿ ಶಾಂತಿನಗರದ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಗಂಭೀರ ಗಾಯಗೊಂಡವರನ್ನು ವೀರಕಂಭ ಮೂಲದವರು ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ವಿಟ್ಲ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರು ವಿಟ್ಲದ ಮೇಗಿನಪೇಟೆಯ ನಿವಾಸಿಯವರದಾಗಿದ್ದು ಎಂದು ತಿಳಿದುಬಂದಿದೆ.





