Breaking
25 Sep 2026, Fri

ಈಜಲು ಹೋದ ಯುವಕ ಹೊಳೆಯಲ್ಲಿ ಮುಳುಗಿ ಸಾವು

ಕುಂದಾಪುರ: ಈಜಲು ಹೋದ ಯುವಕನೋರ್ವ ಉಡುಪಿ ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ, ಗೋಳಿಹೊಳೆಯ ಹೊಟೇಲ್ ಉದ್ಯಮಿ ಬಾಬಣ್ಣ ಅವರ ಪುತ್ರ ರಿಕ್ಷಾ ಚಾಲಕ ಸಂದೀಪ್ ನಾಯ್ಕ(32) ಎಂದು ಗುರುತಿಸಲಾಗಿದೆ.

ಮಾ. 22 ರಂದು ಸಂದೀಪ್‌ ಅವರು ಸ್ನೇಹಿತರೊಂದಿಗೆ ಉಡುಪಿ ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಯಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *