Breaking
25 Sep 2026, Fri

15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಡುಪಿ: 15 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಡುಪಿಯ ಪಡುತೋನ್ಸೆ ಗ್ರಾಮದ ನಿವಾಸಿ ಜುಬೇರ (42 ವ) ಎಂದು ಗುರುತಿಸಲಾಗಿದೆ.

ಈತನ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಇದೀಗ ಆರೋಪಿಯನ್ನು ಬೆಂಗಳೂರಿನ ಶಿವಾಜಿನಗರದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *