ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಉಳಿ ಭೂಮಿಕ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವು ಉಳಿ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ಮಾ. 21 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಳಿ ಕಕ್ಕೆಪದವುವಿನಲ್ಲಿ ಜರಗಿತು.

ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಗಿರಿಯಪ್ಪ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಚಿದಾನಂದ ರೈ ಮಾತಾಡಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಮಾತೃಶ್ರೀ ಹೇಮಾವತಿ ಅಮ್ಮನವರ ದೂರ ದೃಷ್ಟಿಯ ಸಮಾಜಮುಖಿ ಕಾರ್ಯಕ್ರಮದಿಂದ ಅದೆಷ್ಟು ಕುಟುಂಬ ಸ್ವಾವಲಂಬಿಕಳಾಗಲು ಸಹಕಾರಿಯಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ವಿದ್ಯಾ ಮಹಿಳೆಯರ ಹಕ್ಕು ಮತ್ತು ಕಾನೂನಿನ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಿಗೆ ವಿವಿಧ ಸ್ಪರ್ಧೆ ಏರ್ಪಡಿಸಿ . ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕೇಂದ್ರದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ಸವಿತ, ಸೇವಾಪ್ರತಿನಿಧಿ ಉಷಾ, ಸುಧಾ ಉಪಸ್ಥಿತರಿದ್ದರು.

ಶೇಖರ್ ಸ್ವಾಗತಿಸಿ. ಜ್ಞಾನ ವಿಕಾಸ ಸಮನ್ವಯಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *