ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ವೀರ ಕಂಬ ನಿವಾಸಿ ಮಹಮ್ಮದ್ ಅಶ್ರಫ್ (38) ಎಂದು ಗುರುತಿಸಲಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ಇರುವ ಹಿನ್ನೆಲೆ, ಈತನ ವಿರುದ್ಧ ನ್ಯಾಯಾಲಯವು 10ಕ್ಕೂ ಹೆಚ್ಚು ಬಾರಿ ವಾರಂಟ್ ಜಾರಿಗೊಳಿಸಿತ್ತು.
ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.






