Breaking
9 May 2026, Sat

ಆಟೋ ರಿಕ್ಷಾದಲ್ಲಿ ಎಂಡಿಎಂಎ ಮಾರಾಟ: ಮೂವರು ಆರೋಪಿಗಳು ಬಂಧನ

ಮಂಗಳೂರು: ಆಟೋ ರಿಕ್ಷಾದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹೈದರ್ ಅಲಿಯಾಸ್ ಹೈದರ್ ಆಲಿ(53) ತೊಕ್ಕೊಟ್ಟು , ಮೊಹಮ್ಮದ್ ಸಜಾದ್ (29) ತೊಕ್ಕೊಟ್ಟು ಮತ್ತು ಜೈಸನ್ ಮೆನೆಜಸ್ (26) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಪಂಪ್‌ವೆಲ್ ಹಾಗೂ ಎಕ್ಕೂರು ಪರಿಸರದಲ್ಲಿ ಆಟೋರಿಕ್ಷಾದ ಮೂಲಕ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 26 ಗ್ರಾಂ ಎಂಡಿಎಂಎ , ರೂ. 37,000 ನಗದು, 5 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪನ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾಗಳನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *