Breaking
9 Aug 2026, Sun

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ: 10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ನಸೀಮ್ ಎಂದು ಗುರುತಿಸಲಾಗಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದ ಈತ ಕಳೆದ 10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿಯನ್ನು ಉತ್ತರ ಪ್ರದೇಶ ರಾಜ್ಯದ ಖಾಜಿಪುರ ಎಂಬಲ್ಲಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುಳ್ಯದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *