Breaking
25 Mar 2026, Wed

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಿಟ್ಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳದ ಮಂಜೇಶ್ವರ ನಿವಾಸಿ ಮೊಹಮ್ಮದ್ ಫಯಾಜ್ (33) ಎಂದು ಗುರುತಿಸಲಾಗಿದೆ.

2019 ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದು ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಮಂಜೇಶ್ವರ ತಾಲೂಕಿನ ಬಾಯಾರು ಪದವು ಎಂಬಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *