ಸುಳ್ಯ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಿಂತಿಕಲ್ಲು ಸಮೀಪ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸುಳ್ಯ ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಮೀಟರ್ ರೀಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಲೋಕನಾಥ (35) ಎಂದು ಗುರುತಿಸಲಾಗಿದೆ.

ಸುಳ್ಯದಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣವೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.






