Breaking
26 Mar 2026, Thu

ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ: ಚಾಲಕನಿಗೆ ಗಂಭೀರ ಗಾಯ

ಕುಂದಾಪುರ: ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ಪಕ್ಕದಲ್ಲಿದ್ದ ಹೊಂಡಕ್ಕೆ ಬಿದ್ದ ಘಟನೆ ಮಾ. 25 ರಂದು ಕುಂಭಾಶಿ ಬಳಿ ನಡೆದಿದೆ.

ಜಲ್ಲಿ ಸಾಗಿಸುತ್ತಾ ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ಏರಿ ಬಳಿಕ ಪಕ್ಕದ ಹೊಂಡಕ್ಕೆ ಬಿದ್ದಿದೆ.

ಅಪಘಾತದ ತೀವ್ರತೆಗೆ ಲಾರಿ ಚಾಲಕನ ತಲೆ ಹಾಗೂ ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *